ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ತರುಣ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಾಟ ನಡೆಸಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. ಅವರಿಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಎರಡನೇ ಆರೋಪಿಯಾಗಿ ಆಕೆಯ ಸ್ನೇಹಿತ ತರುಣ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೀಗ ತರುಣ್, ತನಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿಕೊಂಡಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತ್ತು. ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿತ್ತಾದರೂ, ಇಂದು ಜಾಮೀನು ಅರ್ಜಿ ವಜಾಗೊಳಿಸಿ, ಜಾಮೀನು ನೀಡಲು ನಿರಾಕರಿಸಿದೆ.
ಈಗಾಗಲೇ ರನ್ಯಾ ರಾವ್ ತಂದೆ ರಾಮಚಂದ್ರ ರಾವ್ ಸೇರಿ ಅನೇಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆಗೆ ಸರಕಾರದ ಎಸಿಎಸ್ ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ ರಚನೆ ಮಾಡಲಾಗಿದೆ. ಗೌರವ್ ಗುಪ್ತಾ ಕಡ್ಡಾಯ ರಜೆಯಲ್ಲಿರುವ ರಾಮಚಂದ್ರ ರಾವ್ ಸೇರಿ ಅನೇಕರ ವಿಚಾರಣೆ ನಡೆಸಿದ್ದಾರೆ.