ಕ್ರಿಸ್ ಮಸ್ ಅಂಗವಾಗಿ 1000 ಬಸ್ ವಿಶೇಷ ಬಸ್: ಬೆಂಗಳೂರಿನಿಂದ ವಿವಿಧ ನಗರಗಳಿಗೆ ಬಸ್

Share It

ಬೆಂಗಳೂರು: ಕ್ರಿಸ್ ಮಸ್ ಅಂಗವಾಗಿ ರಾಜಧಾನಿಯಿಂದ ರಾಜ್ಯದ ಬೇರೆಡೆಗಳಿಗೆ ತೆರಳುವವರ ಅನುಕೂಲಕ್ಕಾಗಿ ಒಂದು ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ.

ಡಿ.19, 20 ಹಾಗೂ 24 ರಂದು ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಹಾಸನ, ಮಂಗಳೂರು, ಕುಂದಾಪುರ, ಕೊಪ್ಪಳ, ಯಾದಗಿರಿ, ರಾಯಚೂರು, ಶಿರಸಿ, ಬಳ್ಳಾರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಿವೆ.

ಮೈಸೂರು ಸ್ಯಾಟಲೈಟ್ ನಿಲ್ದಾಣದಿಂದ ಮೈಸೂರು, ಹುಣಸೂರು, ಮಡಿಕೇರಿ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯೂ ಇದ್ದು, ಸಂಸ್ಥೆಯ ವೆಬ್‌ಸೈಟ್ ಅಥವಾ ಹತ್ತಿರದ ಕೌಂಟರ್‌ನಲ್ಲಿ ಟಿಕೆಟ್ ಕಾಯ್ದಿರಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


Share It

You May Have Missed

You cannot copy content of this page