ರಾಣಿಪೇಟ: ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಓಂಶಕ್ತಿ ದೇವಸ್ಥಾನಕ್ಕೆ ಕರ್ನಾಟಕದಿಂದ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ೨೫ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.