ಹೊಸದಿಲ್ಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ ೧೨.೧೫ಕ್ಕೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ದೆಹಲಿಯ ಲೆಫ್ಟಿನೆಂಟ್ ಜನರಲ್, ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ೨೭ ವರ್ಷಗಳ ಬಳಿಕ ಅಧಿಕಾರಕ್ಕೆ ಬರುತ್ತಿದೆ. ಸುಷ್ಮಾ ಸ್ವರಾಜ್ ನಂತರ ದೆಹಲಿಯ ಸಿಎಂ ಆಗಿ ಮಹಿಳಾ ಅಭ್ಯರ್ಥಿಯನ್ನೇ ಬಿಜೆಪಿ ಆಯ್ಕೆ ಮಾಡಿದೆ.