ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಉತ್ತನ ಹಳ್ಳಿ ರಸ್ತೆಯಿಂದ ಬೆಂಕಿ ಬೆಟ್ಟದ ಕಡೆಗೆ ವ್ಯಾಪ್ತಿಸಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಮಧ್ಯಾಹ್ನದಲ್ಲಿ ಕಾಣಿಸಿಕೊಂಡ ಬೆಂಕಿ ರಾತ್ರಿಯಾದರೂ ಉರಿಯುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.
ಮೈಸೂರಿನಿಂದ ಬೆಟ್ಟಕ್ಕೆ ವಾಹನಗಳು ತೆರಳುವ ರಸ್ತೆಯಲಿ ಬೆಂಕಿಯ ಕೆನ್ನಾಲಗೆ ಆವರಿಸಿದೆ. ಬೆಟ್ಟಕ್ಕೆ ತೆರಳುವ ಭಕ್ತರು ಆತಂಕದಿAದ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದಷ್ಟು ಬೇಗ ಬೆಂಕಿಯನ್ನು ನಿಯಂತ್ರಣಕೆ ತರುವ ಪ್ರಯತ್ನವನ್ನು ನಡೆಸಲಾಗುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.