ಮಹಿಳಾ ಐಪಿಎಲ್ ಪಂದ್ಯಾವಳಿ : ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

Share It

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವ ಹಿನ್ನೆಲೆ, ವೀಕ್ಷಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಫೆಬ್ರವರಿ 22, 24, 25, 26, 27, 28 ಮತ್ತು ಮಾರ್ಚ್‌ 1 ರಂದು ಪಂದ್ಯಗಳು ನಡೆಯಲಿದ್ದು, ಅಂದು ರಾತ್ರಿ 11.20ಕ್ಕೆ ಮೆಟ್ರೋ ನೇರಳೆ ಮಾರ್ಗ ಮತ್ತು ಹಸಿರು ಮಾರ್ಗಗಳ ನಾಲ್ಕು ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೋ ರೈಲುಗಳು ಹೊರಡಲಿವೆ.

ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ಟರ್ಮಿನಲ್‌ಗಳ ಕಡೆಗೆ ರಾತ್ರಿ 11.55ಕ್ಕೆ ರೈಲುಗಳು ಹೊರಡಲಿವೆ.


Share It

You May Have Missed

You cannot copy content of this page