ಬೆಂಗಳೂರು: ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೂರು ವಾರಗಳ ಕಾಲ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.
ಅಧಿವೇಶನದ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಮಾರ್ಚ್ 3 ರಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಮಂಡನೆಯ ನಂತರ ಬಜೆಟ್ ಮೇಲಿನ ಚರ್ಚೆಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಬಜೆಟ್ ಸಿದ್ಧತೆಯ ಕುರಿತು ವಿವಿಧ ಸಮುದಾಯ, ಇಲಾಖೆಗಳ ಜತೆಗೆ ಸಿಎಂ ಸಿದ್ದರಾಮಯ್ಯ ಸಭೆಗಳನ್ನು ನಡೆಸುತ್ತಿದ್ದಾರೆ.
ಗ್ಯಾರಂಟಿಗಳಿAದಾಗಿ ಸರಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ರಾಜ್ಯದ ಜನರಿಗೆ ಏನು ಹೊಸ ಯೋಜನೆಗಳು ಸಿಗಲಿವೆ ಎಂಬುದು ಕುತೂಹಲ ಮೂಡಿಸಿದೆ.