ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕುರುವಂಗಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಅನ್ನು ೬೦ ಮೀಟರ್ ಎಳೆದೊಯ್ದ ಕಾರು ಮತ್ತು ಬೈಕ್‌ಗೆ ಬೆಂಕಿ ಹೊತ್ತಿಸಿಕೊಂಡಿದೆ.
ಅಪಘಾತದಲ್ಲಿ ಬೈಕ್ ಸವಾರ ರಾಜಶೇಖರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೈಕ್ ಅನ್ನು ೬೦ ಮೀ ಎಳೆದೊಯ್ಯುವಾಗ ಕಾರು ಮತ್ತು ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ.