ಬೆಂಗಳೂರು: ಅಂಗನವಾಡಿಗಳಿಗೆ ಹಂಚಿಕೆಯಾಗಬೇಕಿದ್ದ ರೇಷನ್ ಕಿಟ್ ದನದ ಕೊಟ್ಟಿಗೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡುವ ಪೌಷ್ಠಿಕ ಆಹಾರದ ಕಿಟ್‌ಗಳು ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಪತ್ತೆಯಾಗಿವೆ. ಪೌಷ್ಟಿಕ ಆಹಾರದ 79 ಕಿಟ್‌ಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕನ್ನಡದ ಕೆ.ಜೆ.ಹಳ್ಳಿಯ ರುದ್ರಪ್ಪಗೌಡ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಪತ್ತೆಯಾಗಿರುವ ಅಂಗನವಾಡಿಯ ಆಹಾರ ಪದಾರ್ಥಗಳನ್ನು ಕಂಡು ಅಧಿಕಾರಿಗಳೇ ಹೌಹಾರಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದು, ತನಿಖೆ ಕೈಗೊಂಡಿದ್ದಾರೆ.