ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದ ತನಿಖೆಯ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾಚ್.24ಕ್ಕೆ ಮುಂದೂಡಿದೆ.
ಲೋಕಾಯುಕ್ತ ತನಿಖಾಧಿಕಾರಿಯಿಂದ ತನಿಖೆ ಮುಂದುವರಿಕೆ ಬಗ್ಗೆ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.
ಕಾಲಂ ನಂ 17ರಲ್ಲಿ ತನಿಖೆ ಮುಂದುವರಿಕೆ ಎಂದು ಹೇಳಿದ್ದೀರಾ. ಕಾಲಂ ನಂಬರ್ 14ರಡಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದು ಉಲ್ಲೇಖ ಮಾಡಿದ್ದೀರಾ, ಎ2 ಪಾರ್ವತಿ ಅವರಿಗೂ 14 ನಿವೇಶನಗಳು ಹಂಚಿಕೆಯಾಗಿವೆ. ಯಾವ ಅಂಶದ ಬಗ್ಗೆ ತನಿಖೆ ಮುಂದುವರಿದಿದೆ ಎಂಬುದರ ಬಗ್ಗೆ ತನಿಖಾಧಿಕಾರಿಯಿಂದ ಸೂಕ್ತ ಮಾಹಿತಿ ಪಡೆಯುವಂತೆ ಸೂಚನೆ ನೀಡಲಾಗಿದೆ.