ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ 44 ವರ್ಷದ ಆರೋಪಿಗೆ ಸೂರ್ಯಪೇಟೆ ನ್ಯಾಯಾಲಯ 25 ವರ್ಷಗಳ ಜೈಲುಶಿಕ್ಷೆ ಹಾಗೂ 20 ಸಾವಿರ ರು.ಗಳ ದಂಡ ವಿಧಿಸಿದೆ.
ಸೂರ್ಯಪೇಟೆ ನ್ಯಾಯಾಲಯದ ನ್ಯಾಯಾಧೀಶ ಡಾ.ಎಂ.ಶ್ಯಾಮ್ ಶ್ರೀ ಅವರು ಈ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ 25 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರು. ದಂಡ ವಿಧಿಸುವ ಜತೆಗೆ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರು.ಗಳ ಪರಿಹಾರ ನೀಡುವಂತೆ ಸರಕಾರಕ್ಕೆ ಸೂಚನೆ ನೀಡಿತು.
2023ರಲ್ಲಿ ಮೋಥೆಯಲ್ಲಿ ವಾಸವಿದ್ದ ಬಾಲಕಿಯನ್ನು ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಲುವಾಗಿ ಆಕೆಯ ಪೋಷಕರು, ಲಕ್ಷ್ಮಯ್ಯನ ಮನೆಯಲ್ಲಿ ಬಿಟ್ಟು ತೆರಳಿದ್ದರು. ವಾಪಸ್ ಬಂದಾಗ ಬಾಲಕಿ ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂದಿತ್ತು. ಆಗ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗಿತ್ತಾದರೂ., ಆಕೆ ಚೇತರಿಕೆ ಕಂಡಿರಲಿಲ್ಲ.
ಈ ಸಂದರ್ಭದಲ್ಲಿ ಆಕೆಯ ಮೇಲೆ ಲಕ್ಷ್ಮಯ್ಯ ಅತ್ಯಾಚಾರ ಮಾಡಿರುವುದನ್ನು ಬಾಲಕಿ ಆಕೆಯ ತಾಯಿಯ ಜತೆಗೆ ಹೇಳಿಕೊಂಡಿದ್ದಳು. ಆಗ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆ ನಡೆಸಿ, ಆರೋಪಿ ಲಕ್ಷ್ಮಯ್ಯನನ್ನು ಜೈಲಿಗೆ ಕಳುಹಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡದೆ.