ಮಂಡ್ಯ: ಮದ್ದೂರಿನಲ್ಲಿ ಗಣೇಶ ಉತ್ಸವದ ಮೇಲಿನ ಕಲ್ಲುತೂರಾಟ ಘಟನೆ ಸಂಬಂಧ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಣೇಶ ಮೆರವಣಿಗೆ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದು ಮದ್ದೂರಿನಲ್ಲಿ ಗಲಭೆಗೆ ಕಾರಣವಾಗಿತ್ತು. ಹಿಂದೂ ಸಂಘಟನೆಗಳ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಬಿಜೆಪಿ ನಾಯಕರು ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರಕಾರದ ಓಲೈಕೆಯಿಂದಾಗಿ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಘಟನೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.