ಹಾಸನ, ಏಪ್ರಿಲ್ 8: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. ಈ ತಪಾಸಣೆ ವೇಳೆ ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ 9,54,08,422 ಕೋಟಿ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. 56,236 ಬಾಕ್ಸ್‌ಗಳಲ್ಲಿದ್ದ (5,63,756.88 ಲೀಟರ್) ಪವರ್ ಕೂಲ್, ಲೆಜೆಂಡ್, ಬ್ಲಾಕ್‌ಫೋರ್ಟ್, ವುಡ್‌ಪೆಕರ್ ಬ್ರ್ಯಾಂಡ್ ಬಿಯರ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಬಿಯರ್ ವಶಕ್ಕೆ ವುಡ್‌ಪೆಕರ್ ಡಿಸ್ಟಿಲರಿಸ್ ಸನ್ನದುದಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳೆದ 20 ದಿನಗಳಲ್ಲಿ ಜಪ್ತಿಯಾದ ಮದ್ಯ
ಮಾರ್ಚ್ 16 ರಿಂದ ಏಪ್ರಿಲ್ 6 ರವರೆಗೆ ಹಾಸನ ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 944 ಪ್ರಕರಣಗಳು ದಾಖಲು ಮಾಡಿಕೊಂಡಿದ್ದಾರೆ. ಇದರಲ್ಲಿ 3,488.185 ಲೀಟರ್ ಮದ್ಯ, 5,64,362 ಲೀಟರ್ ಬಿಯರ್, 34 ಲೀಟರ್ ವೈನ್, 14 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.
ಇದರ ಜೊತೆಗೆ ಅಬಕಾರಿ ಇಲಾಖೆ ಅಧಿಕಾರಿಗಳು 51 ವಿವಿಧ ರೀತಿಯ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 10,48,76,148 ರೂ ಮೌಲ್ಯದ ಮದ್ಯ ಜಪ್ತಿಮಾಡಲಾಗಿದೆ. 970 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
14.88 ಲಕ್ಷ ಹಣ ಜಪ್ತಿ
ಬಾಗಲಕೋಟೆ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14.88 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ನಾಯನೇಗಲಿ ಚೆಕ್ಪೋಸ್ಟ್ ಬಳಿ ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಲಾರಿಯಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸಲಾಗುತ್ತಿತ್ತು. ತಪಾಸಣೆ ವೇಳೆ ಲಾರಿಯಲ್ಲಿ 14.88 ಲಕ್ಷ ರೂ. ಹಣ ಪತ್ತೆಯಾಗಿದೆ.