ಮಧ್ಯಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರು ಘಟನೆ ರೆಹ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ಬೆಳಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ.
ಭಾರೀ ಮಳೆಯಿಂದಾಗಿ ಪಾಳುಬಿದ್ದ ಮನೆ ಗೋಡೆಯು ಸಂತ್ರಸ್ತರ ಮೇಲೆ ಕುಸಿದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದ ವೇಳೆ ಗೋಡೆ ಕುಸಿದು ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ರೆಹ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ಬೆಳಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಪಾಳುಬಿದ್ದ ಮನೆಯ ಗೋಡೆಯು ಸಂತ್ರಸ್ತರ ಮೇಲೆ ಕುಸಿದಿದೆ. ಗೋಡೆ ಕುಸಿತದ ನಂತರ ಸ್ಥಳೀಯ ಅಧಿಕಾರಿಗಳು ಸೈಟ್‌ನಿಂದ ಹೆಚ್ಚಿನ ಅವಶೇಷಗಳನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಯಾದವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೃತ ಮಕ್ಕಳ ಕುಟುಂಬಗಳಿಗೆ ಸರ್ಕಾರದಿಂದ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದರು.