ಸುದ್ದಿ

ನೇಪಾಳದಲ್ಲಿ ಪ್ರವಾಹ: ನೂರರ ಗಡಿ ದಾಟಿದ ಮೃತರ ಸಂಖ್ಯೆ

Share It

ಕಠ್ಮಂಡು(ನೇಪಾಳ): ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪೂರ್ವ ಮತ್ತು ಮಧ್ಯ ನೇಪಾಳದ ಪ್ರಮುಖ ಪ್ರದೇಶಗಳು ಜಲಾವೃತವಾಗಿವೆ. ರಾಜಧಾನಿ ಕಠ್ಮಂಡು ಸೇರಿ ದೇಶದಾದ್ಯಂತ ೪೮ ಜನರು ಸಾವನ್ನಪ್ಪಿದ್ದಾರೆ. ೬೪ ಜನರು ನಾಪತ್ತೆಯಾಗಿದ್ದಾರೆ. ೪೫ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕನಿಷ್ಠ ೧೯೫ ಮನೆಗಳು ಮತ್ತು ಎಂಟು ಸೇತುವೆಗಳು ಹಾನಿಗೊಳಗಾಗಿವೆ. ಭದ್ರತಾ ಸಿಬ್ಬಂದಿ ಸುಮಾರು ೩,೧೦೦ ಜನರನ್ನು ರಕ್ಷಿಸಿದ್ದಾರೆ. ಕಳೆದ ೪೦-೪೫ ವರ್ಷಗಳಲ್ಲಿ ಕಠ್ಮಂಡುವಿನಲ್ಲಿ ಇಂತಹ ವಿನಾಶಕಾರಿ ಪ್ರವಾಹ ಮತ್ತು ಭೂಕುಸಿತ ನೋಡಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ದೇಶದ ಅನೇಕ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಹೆದ್ದಾರಿಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ನೂರಾರು ಮನೆಗಳು ಮತ್ತು ಸೇತುವೆಗಳನ್ನು ಮಳೆ ನೀರು ಸುತ್ತುವರೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅವ್ಯವಸ್ಥೆಯಿಂದ ಸಾವಿರಾರು ಜನರು ಪರದಾಡುತ್ತಿದ್ದಾರೆ.


Share It

You cannot copy content of this page