ತಿರುವನಂತಪುರ: ಪುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಪಟಾಕಿ ಸಿಡಿಸಿದ ಪರಿಣಾಮ 30 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಆರಿಕೋಡೆಯಲ್ಲಿ ಪುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪಟಾಕಿ ಸಿಡಿಸಲಾಗಿತ್ತು. ಸಿಡಿಸಿದ ಪಟಾಕಿಗಳು ಪ್ರೇಕ್ಷಕರತ್ತ ನುಗ್ಗಿದ್ದು, ಪುಟ್‌ಬಾಲ್ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಚೆಲ್ಲಾಪಿಲ್ಲಿಯಾಗಿ ಓಡಲು ಆರಂಭಿಸಿದೆ.
ಈ ವೇಳೆ ಪಟಾಕಿಯಿಂದ ಮತ್ತು ಆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೩೦ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.