ಹೊಗೆಯ ವಾತಾವರಣ : 100 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ

Share It

ನವದೆಹಲಿ: ದೆಹಲಿಯಲ್ಲಿ ಹೆಚ್ಚಾಗಿರುವ ಮಾಲಿನ್ಯಭರಿತ ಹೊಗೆಯ ಪರಿಣಾಮದಿಂದ ಸುಮಾರು ನೂರಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ದೆಹಲಿಗೆ ಆಗಮಿಸಬೇಕಿದ್ದ 66 ವಿಮಾನಗಳು ಹಾಗೂ ದೆಹಲಿಯಿಂದ ಹೊರಡಬೇಕಿದ್ದ 63 ವಿಮಾನಗಳು ರದ್ದಾಗಿವೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರಯಾಣಿಕರಿಗೆ ಮಾಹಿತಿಯನ್ನು ನೀಡಲಾಗಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರ ಕಳಪೆಮಟ್ಟಕ್ಕೆ ತಲುಪಿದ್ದು, ಹಿಮದಿಂದ ಆವೃತವಾಗುತ್ತಿದೆ. ಇದರಿಂದ ಅನೇಕ ಅಪಘಾತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಸರಿಯಲ್ಲ ಎಂಬ ಕಾರಣಕ್ಕೆ ಪ್ರಾಧಿಕಾರ ಈ ತೀರ್ಮಾನ ತೆಗೆದುಕೊಂಡಿದೆ.


Share It

You May Have Missed

You cannot copy content of this page