ಬೆಂಗಳೂರು ರಸ್ತೆ ಗುಂಡಿ ಮುಚ್ಚಲು 15 ದಿನಗಳ ಗಡುವು
ಬೆಂಗಳೂರು: ನಗರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ 15 ದಿನಗಳ ಗಡುವು ನೀಡಲಾಗಿದೆ.
ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ರಸ್ತೆ ಗುಂಡಿ ಮುಚ್ಚಲು ಸರಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನು ಗಮನಿಸಿದ ನಗರದ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ, ತುರ್ತಾಗಿ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿ, ಅದರ ಫೋಟೋ ತೆಗೆದು ಆಪ್ ಮೂಲಕ ಅಪ್ಲೋಡ್ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.


