ಉಪಯುಕ್ತ ಸುದ್ದಿ

ರೈಲ್ವೆಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ: ತಪ್ಪಿತು ಗಂಟೆಗಟ್ಟಲೆ ಕಾಯುವ ಸಂಕಟ

Share It

ಬೆಂಗಳೂರು : ಬೆಂಗಳೂರು ರೈಲ್ವೆ ವ್ಯಾಪ್ತಿಯ 104 ರೈಲು ನಿಲ್ದಾಣಗಳಲ್ಲಿ ಆನ್‌ಲೈನ್ ಪೇಮೆಂಟ್ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಖರೀದಿಸಿ ಪ್ರಯಾಣ ಮಾಡಬಹುದಾಗಿದೆ.

ಬೆಂಗಳೂರಿನ ಕೆಎಸ್‌ಆರ್ ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ಸ್ಟೇಷನ್, ಎಸ್‌ಎಂವಿಟಿ, ಕಂಟೋನ್ಮೆAಟ್ ರೈಲ್ವೆ ನಿಲ್ದಾಣ ಸೇರಿದಂತೆ ಬೆಂಗಳೂರು ವ್ಯಾಪ್ತಿಯ ಎಲ್ಲಾ ರೈಲ್ವೆ ಸ್ಟೇಷನ್‌ಗಳಲ್ಲೂ ಕ್ಯೂಆರ್ ಕೋಡ್‌ಗಳನ್ನು ಅಳವಡಿಸಲಾಗಿದೆ.

140 ಯುಟಿಎಸ್ (ಅನ್ ರಿಸರ್ವ್ಡ್ ಟಿಕೆಟಿಂಗ್ ಸಿಸ್ಟಂ) ಕೌಂಟರ್‌ಗಳಲ್ಲಿ ಹೊಸ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಸಾಮಾನ್ಯ ದರ್ಜೆಯ ಟಿಕೆಟ್ ಮೊತ್ತದ ಪಾವತಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ತರಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿ ತ್ರಿನೇತ್ರಾ ತಿಳಿಸಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‌ನಲ್ಲಿ 20 ಕೌಂಟರ್, ಯಶವಂತಪುರದಲ್ಲಿ ೧೦ ಕೌಂಟರ್ ಸೇರಿದಂತೆ ಬೆಂಗಳೂರು ವ್ಯಾಪ್ತಿಯ 108 ರೈಲ್ವೇ ಸ್ಟೇಷನ್‌ಗಳ 140 ಟಿಕೆಟ್ ಕೌಂಟರ್ ಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್‌ಗಳನ್ನು ಅಳವಡಿಸಲಾಗಿದೆ.


Share It

You cannot copy content of this page