ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರುಪರೀಕ್ಷೆಗೆ ತೀರ್ಮಾನ

Share It

ಬೆಂಗಳೂರು: ಪ್ರಶ್ನೆಪತ್ರಿಕೆಯ ಲೋಪಗಳ ಕಾರಣಕ್ಕೆ ಕೆ ಪಿ ಎಸ್ ಇತ್ತೀಚೆಗೆ ನಡೆಸಿದ್ದ ಪ್ರೊವೆಷನರಿ ಹುದ್ದೆಗಳ ಪರೀಕ್ಷೆ ರದ್ದುಗೊಳಿಸಿರುವ ಸರಕಾರ ಇನ್ನೆರೆಡು ತಿಂಗಳಲ್ಲಿ ಮರುಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

https://twitter.com/CMofKarnataka/status/1830507065242182002?t=crXVyr_FchfgjF8aAhwMMw&s=19

Share It

You May Have Missed

You cannot copy content of this page