ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1500 ಹೆಚ್ಚುವರಿ ಬಸ್ : ಮುಂಗಡ ಬುಕಿಂಗ್ ವ್ಯವಸ್ಥೆ
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಊರಿಗೆ ತೆರಳುವವರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ೧೫೦೦ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಬೆಂಗಳೂರಿನಿAದ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವವರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಅಂತರಾಜ್ಯ ಪ್ರಯಾಣಕ್ಕೆ ಅನುಕೂಲವಾಗುವಂತೆ ತಮಿಳುನಾಡು, ಕೇರಳ ಮತ್ತು ಆಂಧ್ರ ಹಾಗೂ ತೆಲಂಗಾಣದ ನಡುವೆಯೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಈ ಸಲ ಕಲ್ಪಿಸಲಾಗಿದೆ. ಬಸ್ ನಿಲ್ದಾಣಕ್ಕೆ ಹೊರಡುವ ಮುನ್ನ ಟಿಕೆಟ್ ಕಾಯ್ದಿರಿಸಿ, ಟಿಕೆಟ್ ಮೇಲೆ ನಿಗದಿ ಮಾಡಿರುವ ಪಿಕಪ್ ಪಾಯಿಂಟ್‌ಗೆ ಅನುಗುಣವಾಗಿ ಬಸ್ ಹತ್ತಲು ಅವಕಾಶವಿದೆ.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದರೆ, ಶೇ. ೫ ರಷ್ಟು ರಿಯಾಯಿತಿ ಮತ್ತು ಹೋಗುವ ಮತ್ತು ಬರುವ ಎರಡು ಕಡೆಯ ಟಿಕೆಟ್ ಒಮ್ಮೆಲೆ ಕಾಯ್ದಿರಿಸಿದರೆ, ಶೇ. ೧೦ ರಷ್ಟು ರಿಯಾಯಿತಿ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ವಿಶೇಷ ಬಸ್‌ಗಳು ಹೊರಡುವ ಸಮಯ, ಸ್ಥಳಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗುವುದು ಜತೆಗೆ ಬುಕ್ ಮಾಡಿದ ಟಿಕೆಟ್ ಮೇಲೆ ಪ್ರಯಾಣಿಕರಿಗೆ ಬಸ್ ಹೊರಡುವ ವಿವರ ನೀಡಲಾಗುವುದು. ಜತೆಗೆ, ಆಯಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಒದಗಿಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ.


