ಚಿತ್ರದುರ್ಗ: ನಗರದ ವಿ.ಸಿ ಬಡವಾಣೆಯಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರನ್ನು ಕೆಪಿಸಿಸಿ ಖರೀದಿ ಮಾಡಲು ಮುಂದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಳ್ಕಾರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ನೇತೃತ್ವದ ನಿಯೋಗ ಸೋಮವಾರ ನಿಜಲಿಂಗಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಜಲಿಂಗಪ್ಪ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ನಿಜಲಿಂಗಪ್ಪ ಅವರ ಮನೆ ಪರಿಶೀಲನೆ ನಡೆಸಿದ್ದೇವೆ. ನಿಜಲಿಂಗಪ್ಪ ಅವರು ಬಾಳಿ ಬದುಕಿದ ಮನೆಯನ್ನು ಪಕ್ಷದಿಂದಲೇ ಖರೀದಿಸಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ತಿಳಿಸಿದರು.