ಅಪರಾಧ ಸಿನಿಮಾ ಸುದ್ದಿ

ಎರಡು ದಿನದೊಳಗೆ ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Share It

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ನೀಡಿ ಸಲಹೆ ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್‌ಎಸ್‌ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್‌ನ ಎಫ್‌ಎಸ್‌ಎಲ್‌ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ ಎಂದಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ವಿವರವಾಗಿ ತನಿಖೆ ಮಾಡಿದ್ದಾರೆ. ಸುಮಾರು ೧೦೦ ಕ್ಕೂ ಹೆಚ್ಚು ಎವಿಡೆನ್ಸ್ಗಳನ್ನು ಕಲೆ ಹಾಕಿದ್ದಾರೆ. ಬೆಂಗಳೂರು, ಮೈಸೂರು, ಚಿತ್ರದುರ್ಗದ ಹಲವು ಕಡೆ ಮಹಜರು ಮಾಡಿದ್ದಾರೆ. ಹಲವಾರು ಸಿಸಿಟಿವಿ ಪರಿಶೀಲನೆ ನಡೆಸಿ ದೃಶ್ಯಗಳನ್ನು ಸಂಗ್ರಹ ಮಾಡಿದ್ದಾರೆ. 100ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿ ಹಲವರ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ.


Share It

You cannot copy content of this page