ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋ F46 ಈವೆಂಟ್ನಲ್ಲಿ ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಮಂಗಳವಾರ ಸ್ಟೇಡ್ ಡಿ ಫ್ರಾನ್ಸ್ ಸ್ಟೇಡಿಯಂ ನಲ್ಲಿ ನಡೆದ ಸ್ಪರ್ಧೆಯಲ್ಲಿ ಅತ್ಯುತ್ತಮ ಪೈಪೋಟಿ ಕಂಡು ಬಂದಿತ್ತು. ಅದರಲ್ಲೂ ಮೂವರು ಭಾರತೀಯರು ಟಾಪ್-5 ಹಣಾಹಣಿಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.