ಅಪರಾಧ ಸುದ್ದಿ

ಜಾತ್ರೆಗೆ ಬಂದವರನ್ನು ಮಸಣಕ್ಕೆ ಕಳುಹಿಸಿದ ರಸ್ತೆ ಅಪಘಾತ: 4 ಯುವಕರ ಸಾವು

Share It

ವಿಜಯಪುರ: ರಸ್ತೆ ಅಪಘಾತದಲ್ಲಿ 4ಮಂದಿ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಜಾತ್ರೆಗೆಂದು ಬಂದ ಯುವಕರು ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದಾಗ ಯುವಕರ ಮೇಲೆ ಬೈಕ್ ಹರಿದು ನಾಲ್ವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರು ಮೃತಪಟ್ಟಿದ್ದಾರೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳಾಗಿದ್ದಾರೆ.

ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page