ಸಕಲೇಶಪುರ: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು.

