ರಾಜಕೀಯ ಸುದ್ದಿ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 27ನೇ ಪದಕಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಕಂಚಿನ ಪದಕ

Share It

ಬೆಂಗಳೂರು: ಭಾರತದ ಹೊಕಾಟೊ ಹೊಟೊಝೆ ಸೆಮಾ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.

ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್‌ ಮೈದಾನದಲ್ಲಿ ನಡೆದ ಫೈನಲ್ ಸುತ್ತಿನಲ್ಲಿ 14.65 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ಹೊಕಾಟೊ ಮೂರನೇ ಸ್ಥಾನ ಪಡೆದರು.

ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ 27ನೇ ಪದಕ ಗೆದ್ದುಕೊಟ್ಟರು. ಇನ್ನು ಈ ಸ್ಪರ್ಧೆಯಲ್ಲಿ ಇರಾನ್‌ನ ಯಾಸಿನ್ ಖೋಸ್ರಾವಿ 15.96 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಪದಕ ಗೆದ್ದರೆ, ಬ್ರೆಝಿಲ್‌ನ ಥಿಯಾಗೊ ಪಾಲಿನೊ ಡಾಸ್ ಸ್ಯಾಂಟೋಸ್ 15.06 ಮೀಟರ್‌ಗಳ ಅತ್ಯುತ್ತಮ ಪ್ರಯತ್ನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.


Share It

You cannot copy content of this page