ಸುದ್ದಿ

ಇಂದು ಮುಡಾ ಹಗರಣದ ಅರ್ಜಿ ವಿಚಾರಣೆ

Share It

ಬೆಂಗಳೂರು: ಮುಡಾ ಹಗರಣ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3.30ಕ್ಕೆ ವಿಚಾರಣೆ ನಡೆಯಲಿದೆ.
ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿಲಿದ್ದಾರೆ.

ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಚಿವ ಸಂಪುಟ ಅಡ್ವೊಕೆಟ್ ಜನರಲ್‌ ಅಭಿಪ್ರಾಯ ಆಧರಿಸಿ ಶಿಫಾರಸು ಮಾಡಿತ್ತು. ಅಡ್ವೊಕೆಟ್ ಜನರಲ್ ನೀಡಿದ್ದ ಅಭಿಪ್ರಾಯದಂತೆ 91 ಪುಟಗಳ ಪ್ರತಿಕ್ರಿಯೆ ನೀಡಿತ್ತು.

ಆದರೆ, ಶಿಫಾರಸು ಮಾಡುವಾಗ ಸಚಿವ ಸಂಪುಟ ತನ್ನ ವಿವೇಚನೆ ಬಳಸಿಲ್ಲ. ಅಡ್ವೊಕೆಟ್ ಜನರಲ್ ಅಭಿಪ್ರಾಯವನ್ನೇ ಯಥಾವತ್ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಕಾಮಾ, ಫುಲ್ ಸ್ಟಾಪ್ ಕೂಡಾ ಬದಲಿಸಿಲ್ಲ ಅಂತಾ ತುಷಾರ್ ಮೆಹ್ತಾ ವಾದಿಸಿದ್ದಾರೆ.

ಈ ವಾದಕ್ಕೆ ಅಡ್ವೊಕೆಟ್ ಜನರಲ್ ನೀಡಿದ್ದ ಕಾನೂನು ಅಭಿಪ್ರಾಯದ ಕುರಿತು ಸೋಮವಾರ ವಾದ ನಡೆಯಲಿದೆ. ಶಶಿಕಿರಣ್ ಶೆಟ್ಟಿ ಸರ್ಕಾರದ ಕ್ರಮ ಮತ್ತು ತಮ್ಮ ಲೀಗಲ್ ಒಪಿನಿಯನ್ ಸಮರ್ಥಿಸಿಕೊಳ್ಳಲಿದ್ದಾರೆ.


Share It

You cannot copy content of this page