ಕಲಬುರಗಿ: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ಶೇ.58ಕ್ಕೆ ಏರಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಯಾಂಕ್ ಖರ್ಗೆ ತಿಳಿಸಿದ್ದಾರೆ.
ತೆರಿಗೆ ಹಣ ವಸೂಲಿಗೆ ಗುರಿ ನಿಗದಿ ಹಾಗೂ ಆನ್ ಲೈನ್ ಮೂಲಕ ಪಾವತಿಸಲು ಅನುವಾಗಲು ಪಿಓಎಸ್ ಸಾಧನನೀಡಿರುವುದರಿಂದ ತೆರಿಗೆ ಪ್ರಮಾಣ ಹೆಚ್ಚಾಗಿದೆ ಎಂದು ಸೋಮವಾರ ಕಲಬುರಗಿ ಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾಕ್೯ನಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಭೂಮಿ ನೀಡಲಾಗಿದೆ. ಬಿಜೆಪಿಯವರಿಗರ ಪ್ರಿಯಾಂಕ್ ಖರ್ಗೆ ಹೆಸರು ಸಮಸ್ಯೆಯಾಗಿದೆ ಎಂದು ಹೇಳಿದರು.
ಸರ್ಕಾರವನ್ನು ಕೆಡವಲು ಕೇಂದ್ರ ಸರ್ಕಾರ ರಾಜ್ಯಪಾಲರ ದುರ್ಬಳಕೆ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರ ಕುರ್ಚಿ ಭದ್ರವಾಗಿದೆ. ಎಂ.ಬಿ.ಪಾಟೀಲ ಅವರೇ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದರು.
ಮಳೆಯಿಂದ ಕಲಬುರಗಿ ಜಿಲ್ಲೆಯಲ್ಲಿ ರಸ್ತೆಗಳು ಹಾಳಾಗಿದ್ದು, ದುರಸ್ತಿಗಾಗಿ 2 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.

