ಬೆಂಗಳೂರು: ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ನಡೆದ ಗಣಪತಿ ಪೂಜಾ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ರಾಮಲಿಂಗಾ ರೆಡ್ಡಿ ಭಾಗವಹಿಸಿದ್ದರು.
ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳು ಗಣೇಶ ಪ್ರತಿಷ್ಠಾಪನೆ ಮಾಡಿ ಪೂಜೆ ನಡೆಸುತ್ತಾ ಬಂದಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿ, ಪೂಜೆ ನಡೆಸಿದರು.
ಈ ವೇಳೆ ಕೆಎಸ್ಆರ್ ಟಿಸಿ ಉಪಾಧ್ಯಕ್ಷ ಮಹಮ್ಮದ್ ರಿಜ್ಚಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ನಿರ್ದೇಶಕರಾದ ಡಾ.ಕೆ ನಂದಿನಿದೇವಿ ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದರು.

