ಬೆಂಗಳೂರು: ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವಿವರಗಳನ್ನು ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಹೈಕೊಟ್೯ ಸೂಚನೆ ನೀಡಿದೆ.
ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.
ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.
ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠವು ಮುಂದಿನ ವಿಚಾರಣೆಯವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ.

