ಬೆಂಗಳೂರು: ವಾರ್ತಾ ಮತ್ತು ಪ್ರಸಾರ ಇಲಾಖೆಯಲ್ಲಿ ಹೊಸದಾಗಿ ರಚನೆಯಾಗಿರುವ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರನ್ನು ನೇಮಿಸಲಾಗಿದೆ.
ಸರಕಾರ ಹೊರಡಿಸಿರುವ ಆದೇಶದಲ್ಲಿ ರಮೇಶ್ ಬಾಬು ಅವರನ್ನು ಅಧ್ಯಕ್ಷರಾಗಿ ನೇಮಿಸಿದ್ದು, ಕೆಪಿಸಿಸಿ ಜನರಲ ಸೆಕ್ರೆಟರಿ ಎಂ.ರಾಮಚಂದ್ರಪ್ಪ ಮತ್ತು ನಹೀದ್ ಅತಾಹುಲ್ಲಾ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

