ಉಪಯುಕ್ತ ಸುದ್ದಿ

ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭ

Share It

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಚಾಲಕ ಕಂ. ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ, ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಚಾಲನ ವೃತ್ತಿ ಪರೀಕ್ಷೆ ಸೆ.18 ರಿಂದ ಆರಂಭವಾಗಲಿದೆ.

ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ನಾಬಾದ್ ಪರೀಕ್ಷಾ ಕೇಂದ್ರವನ್ನು ಆಯ್ಕೆ, ಮಾಡಿಕೊಂಡಿರುವ ಅಭ್ಯರ್ಥಿಗಳು ಸೆ.18 ರ ಬುಧವಾರದಿಂದ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹ ಅಭ್ಯರ್ಥಿಗಳು ಸೆ.13 ರ ಶುಕ್ರವಾರ ಮಧ್ಯಾಹ್ನ 1 ಗಂಟೆಯ ನಂತರ, ನಿಗಮದ ವೆಬ್ ಸೈಟ್ ksrtcjobs.Karnataka.gov.in ನಲ್ಲಿ ಕರಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಸೂಚಿಸಿದೆ.

ಜತೆಗೆ ಕರಪತ್ರದಲ್ಲಿರುವ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ವೇಳೆ ತೆಗೆದುಕೊಂಡು ಬರಲು ಸೂಚನೆ ನೀಡಲಾಗಿದೆ. ಜತೆಗೆ ಆಯ್ಕೆ ಸಂಪೂರ್ಣ ಪಾರದರ್ಶನಕವಾಗಿದ್ದು, ಯಾವುದೇ ಶಿಫಾರಸು ಅಥವಾ ಒತ್ತಡಕ್ಕೆ ಅವಕಾಶವಿಲ್ಲ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.


Share It

You cannot copy content of this page