ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಪಾದಯಾತ್ರೆ: ಛಲವಾದಿ ನಾರಾಯಣಸ್ವಾಮಿ

Share It

ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್‌ಐಟಿ ರಚಿಸಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣವನ್ನು ಎತ್ತಿ ಹಿಡಿದು ಪಾದಯಾತ್ರೆ ಕೈಗೊಳ್ಳುವ ರಾಜ್ಯ ನಾಯಕರ ಸಲಹೆಗಳಿಗೆ ಕೇಂದ್ರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಪಾದಯಾತ್ರೆಯ ವಿವರವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದು, ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ಎಸಗಿದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಸ್‌ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದಡ್ಡಲ್‌ಗೆ ಸರ್ಕಾರ ರಕ್ಷಣೆ ನೀಡುತ್ತಿರುವುದೇಕೆ? ಎಸ್ಐಟಿ ತನಿಖೆಯ ಮೇಲೆ ನಂಬಿಕೆಯಿಲ್ಲದಂತಾಗಿದೆ. ಇಡಿ ವರದಿ ನೀಡಿದ್ದರೂ, ಎಸ್‌ಐಟಿ ವರದಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಆರೋಪಿಸಿದರು.


Share It

You cannot copy content of this page