ಬೆಂಗಳೂರು: ರಾಜ್ಯದಲ್ಲಿರುವ ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಲಾಗಿದೆ. ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಗೋಕಾಕ್‌ನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಲವರು ಸಾಂಪ್ರದಾಯಿಕ ವೈದ್ಯ ಪದ್ಧತಿಗಳನ್ನು ಅಭ್ಯಾಸ ಮಾಡುತ್ತಿದ್ದಾರೆ.
ಈ ಸಮಸ್ಯೆ ರಾಜ್ಯಾದ್ಯಂತ ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿನ ಸಿಬ್ಬಂದಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.
5 ವರ್ಷಗಳಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದವು. ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಶುಶ್ರೂಷಕರು ಹಾಗೂ ಇತರೆ ಅಗತ್ಯ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ನಿಟ್ಟಿನಲ್ಲಿ ಶೀಘ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.