ಬಿ.ವೈ.ವಿಜಯೇಂದ್ರ ರಾಜ್ಯಧ್ಯಕ್ಷರಾಗಿ ಹೆಚ್ಚು ದಿನ ಉಳಿಯುವುದಿಲ್ಲ: ಕೆ.ಎಸ್. ಈಶ್ವರಪ್ಪ
ಹುಬ್ಬಳ್ಳಿ: ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೆಚ್ಚು ದಿನ ಉಳಿಯುವುದಿಲ್ಲ. ಅವರನ್ನು ಪದಚ್ಯುತಗೊಳಿಸಿದರೆ ನಾನು ಬಿಜೆಪಿಗೆ ಮರಳುತ್ತೆನೆ ಎಂದು ಮಾಜಿ ಉಪಮುಖ್ಯಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮೋಡಿಮಾಡಿ ತನ್ನ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಹೆಚ್ಚು ದಿನ ಉಳಿಯಲ್ಲ. ಹೊಂದಾಣಿಕೆ ರಾಜಕಾರಣ ಉಳಿಯುವುದಿಲ್ಲ. ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಇಲ್ಲ ಎಂಬ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಅದು ಹೋಗಬೇಕು’. ಇದು ಪ್ರಧಾನಿ ನರೇಂದ್ರ ಮೋದಿ ಅವರ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.
ನಮ್ಮ ಭಿಕ್ಷೆಯಿಂದ ವಿಜಯೇಂದ್ರ ಗೆದ್ದಿದ್ದು ಎಂದು ಡಿಕೆಶಿ ಹೇಳುತ್ತಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಮಾಡಿದರು. ಈ ಹೊಂದಾಣಿಕೆ ರಾಜಕೀಯ ಬೇಡ ಅನ್ನೋ ಕಾರಣಕ್ಕೆ ನಾನು ಚುನಾವಣಾಗೆ ಸ್ಪರ್ಧೆ ಮಾಡಿದೆ. ಇಬ್ಬರೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರ ರಾಜೀನಾಮೆ ಪರವಾಗಿಲ್ಲ, ಹೈಕೋರ್ಟ್ ತೀರ್ಪು ಅವರ ಪರವಾಗಿ ಬರಲಿ ಎಂದು ಹಾರೈಸುತ್ತೇನೆ, ಮುಡಾ ಹಗರಣದಲ್ಲಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದಾದರೆ ಅವರ ವಿರುದ್ಧ ತೀರ್ಪು ಬರುವುದಾದರೂ ಹೇಗೆ? ನ್ಯಾಯಾಲಯ ಅವರನ್ನು ದೋಷಿ ಎಂದು ಪರಿಗಣಿಸಿದರೆ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.