ರಾಜ್ಯದ 2 ಲಕ್ಷ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿಲ್ಲವಾದ್ದರಿಂದ ಈ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ಗೃಹ ಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದಲ್ಲಿ ಆದಾಯ ತೆರಿಗೆ ಪಾವತಿ ಮಾಡುವ ಮತ್ತು ಜಿಎಸ್ಟಿ ಪಾವತಿಸುವ ಕುಟುಂಬಗಳ 2 ಲಕ್ಷ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿಲ್ಲವಾದ್ದರಿಂದ ಈ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ಗೃಹ ಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ. ಈ ಆದೇಶವನ್ನು ತಕ್ಷಣವೇ ಜಾರಿಗೊಳಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ.
