ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಉಗ್ರರೊಂದಿಗೆ ನಡೆದ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಇಬ್ಬರಿಗೆ ಗಾಯವಾಗಿರುವ ಘಟನೆ ಸೆ.14ರಂದುನಡೆದಿದೆ.
ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ಸಂಜೆ ಅಡಗಿರು ಉಗ್ರರೊಂದಿಗೆ ಗುಂಡಿನ ದಾಳಿ ನಡೆದಿದೆ.
ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರಿಗೆ ಗಾಯಗಳಾಗಿವೆ. ಅವರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ನಾಲ್ವರು ಸೈನಿಕರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.