ಅಪರಾಧ ಸುದ್ದಿ

ಜಾಲಹಳ್ಳಿ ಕ್ರಾಸ್ ನಲ್ಲಿ ರೋಡ್ ರೇಜ್ ಪ್ರಕರಣ: ಬೈಕ್ ಸವಾರ ಸುಲೇಮಾನ್ ಗೆ ಥಳಿತ

Share It

ಬೆಂಗಳೂರು: ಬೆಂಗಳೂರು ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಾಲಹಳ್ಳಿ ಕ್ರಾಸ್ ನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆದಿದೆ.

ಬೈಕ್ ಸವಾರ ಸುಲೇಮಾನ್ ನನ್ನು ಆಟೋದಲ್ಲಿ ಓವರ್ ಟೇಕ್ ಮಾಡಿದ ವ್ಯಕ್ತಿಗಳು ನಿಂದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದನ್ನೇ ನೆಪವಾಗಿಸಿಕೊಂಡು ಆಟೋದಲ್ಲಿದ್ದ ಇಬ್ಬರು ವ್ಯಕ್ತಿಗಳು ಥಳಿಸಿದ್ದಾರೆ.

ಬೈಕ್ ಸವಾರ ಸುಲೇಮಾನ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page