ಅಪರಾಧ ಸುದ್ದಿ

ದೇವನಹಳ್ಳಿ: ಸರಣಿ ಅಪಘಾತ; ಹಲವರಿಗೆ ಗಾಯ

Share It

ಬೆಂಗಳೂರು: 3 ಲಾರಿ, 1ಬಸ್, ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಕ್ಲೀನರ್, ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳಿಗೆ ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತಕ್ಕೀಡಾದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ವೇಲೆ ಈ‌ ವೇಳೆ ಏಕಾಏಕಿ ಬ್ರೇಕ್​ ಹಾಕಿದ್ದಕ್ಕೆ ಕ್ಯಾಂಟರ್ ವಾಹನ ಪಲ್ಟಿಯಾಗಿದೆ. ಪಲ್ಟಿಯಾದ ಕ್ಯಾಂಟರ್​ಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಅಪಘಾತ ಹಿನ್ನೆಲೆ ಹೆದ್ದಾರಿಯಲ್ಲಿ ಒಂದು ಬದಿಯ ರಸ್ತೆ ಬಂದ್ ಮಾಡಲಾಗಿದೆ.

ಒಂದೇ ರಸ್ತೆಯಲ್ಲಿ ಎರಡು ಕಡೆಯ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು, ಲಾರಿ ಚಾಲಕರು ಪರಾರಿಯಾಗಿದ್ದಾರೆ.

ಇಬ್ಬರು ಚಾಲಕರು ವಾಹನಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಉಳಿದಿರುವ 2 ಲಾರಿ, ಒಂದು ಬಸ್ ಅನ್ನು ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನಗಳನ್ನು ತೆರವು ಮಾಡಲಾಗಿದೆ.


Share It

You cannot copy content of this page