ಬೆಂಗಳೂರು: ಟಿವಿ-ಡಿಶ್ ಕೇಬಲ್ ರಿಪೇರಿ ನೆಪದಲ್ಲಿ ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ನಿವಾಸಿ ನಾಗರಾಜ್ ಅಲಿಯಾಸ್ ರಿಹಾನ್(32) ಬಂಧಿತ. ಆರೋಪಿಯಿಂದ 20 ಲಕ್ಷ ರು. ಮೌಲ್ಯದ 300 ಗ್ರಾಂ ಚಿನ್ನಾಭರಣ ಹಾಗೂ ಒಂದು ಕೆ.ಜಿ.ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಟಿವಿ ಡಿಶ್ ರಿಪೇರಿ ಮಾಡುವ ನೆಪದಲ್ಲಿ ಒಂಟಿ ಮನೆಗಳನ್ನ ಗುರಿಯಾಗಿಸಿಕೊಂಡ ಕಳ್ಳತನ ಮಾಡುತ್ತಿದ್ದ, ಕಳ್ಳತನದ ನಂತರ ನಾಗರಾಜ್ ಪತ್ನಿ ಅವುಗಳನ್ನು ಮಾರಾಟ ಮಾಡಲು ಸಹಕರಿಸಿದ್ದಳು ಎನ್ನಲಾಗಿದೆ.
ಬ್ಯಾಡರಹಳ್ಳಿಯ ಚೇತನ್ ಸರ್ಕಲ್ ಬಳಿ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ಮಾಡಿದ ಪೊಲೀಸರು, ಘಟನೆ ನಡೆದ ಸ್ಥಳದಿಂದ ಬೆರಳಚ್ಚು ಕಲೆ ಹಾಕಿದ್ದರು.
ಸ್ಥಳದಲ್ಲಿ ಕಳ್ಳ ನಾಗರಾಜ್‌ನ ಬೆರಳಚ್ಚು ಪತ್ತೆಯಾಗಿತ್ತು. ಈ ಸುಳಿವಿನ ಮೇರೆಗೆ ಪೊಲೀಸರು ಆರೋಪಿಯವ ಪತ್ತೆಗೆ ಬಲೆ ಬಲೆ ಬೀಸಿದ್ದರು. 10ತಿಂಗಳ ನಂತರ ಆರೋಪಿ ಇತ್ತೀಚೆಗೆ ನೈಸ್ ರಸ್ತೆಯ ಕೊಡಿಗೆಹಳ್ಳಿ ಬ್ರಿಡ್ಜ್ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಎರಡು ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಆಕೆಯ ಒತ್ತಾಸೆಗೆ ಮಣಿದು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ. ಜೊತೆಗೆ ತನ್ನ ಹೆಸರನ್ನು ರಿಹಾನ್ ಎಂದು ಬದಲಿಸಿಕೊಂಡಿದ್ದ. ಈತನ ಅಪರಾಧ ಕೃತ್ಯಗಳಿಗೆ ಪತ್ನಿಯೂ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಳು ಎಂದು ತನಿಖೆಯಿಂದ ತಿಳಿದು ಬಂದಿದೆ.

