ಅಪರಾಧ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡುತ್ತಿದ್ದ ಶಿಕ್ಷಕನ ಬಂಧನ

Share It

ಬೆಳಗಾವಿ: ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕ ಮೊಹಮ್ಮದ್​ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಇತ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ಅಲ್ಲದೆ ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್​ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್​ನಲ್ಲಿ ಸೇವ್​​ ಮಾಡಿಕೊಂಡಿದ್ದ.

ಶಿಕ್ಷಕ ಮೊಹಮ್ಮದ್​ ಸಾದಿಕ್ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಓರ್ವ ವಿದ್ಯಾರ್ಥಿನಿ ತಾಯಿಯ ಮುಂದೆ ದೌರ್ಜನ್ಯದ ಬಗ್ಗೆ ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ಶಿಕ್ಷಕ ಮೊಹಮ್ಮದ್​ ಸಾದಿಕ್ ಮೊಬೈಲ್​ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಮೊಬೈಲ್​ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ.

ಶಿಕ್ಷಕ ಮೊಹಮ್ಮದ್​ ಸಾದಿಕ್ ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿಯವನಾಗಿದ್ದು,ಐದು ವರ್ಷದಿಂದ ಚಿಕ್ಕೋಡಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಆರೋಪಿಯ ಮೊಬೈಲ್ ಕೂಡ ಸೀಜ್ ಮಾಡಿದ್ದೇವೆ. ಮೊಬೈಲ್​ನಲ್ಲಿನ ಕೆಲ ಫೋಟೊಗಳು ಡಿಲಿಟ್ ಆಗಿದ್ದು ಎಫ್‌ಎಸ್‌ಎಲ್​ಗೆ ಕಳುಹಿಸುತ್ತೇವೆ.

ಸುಮಾರು ವಿದ್ಯಾರ್ಥಿನಿಯರು ಆತನ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಪೋಕ್ಸೊ ಕಾಯ್ದೆಯಡಿ ತನಿಖೆ ಮಾಡುತ್ತಿದ್ದೇವೆ ಎಂದು ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.


Share It

You cannot copy content of this page