ಅಪರಾಧ ಸುದ್ದಿ

ಹಿಂದೂ-ಮುಸ್ಲೀಂ ಮುಖಂಡರ ಸವಾಲು, ಪ್ರತಿ ಸವಾಲು: ಬಿ.ಸಿ.ರೋಡ್ ಮಸೀದಿ ಮೇಲೆ ಕಲ್ಲು ತೂರಾಟ

Share It

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಇಂದು ಬಿಸಿ ರೋಡ್ ಚಲೋ: ಇಂದು ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರು ಬಂಟ್ವಾಳದ ಬಿಸಿ ರೋಡ್ ಚಲೋಗೆ ಕರೆ ಕೊಟ್ಟಿದ್ದಾರೆ. ವಿಎಚ್​​ಪಿ ಮುಖಂಡ ಶರಣ್ ಪಂಪ್​​ವೆಲ್​ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದ ಕಾರಣ ಈ ಜಾಥಾಕ್ಕೆ ಕರೆ ನೀಡಲಾಗಿದೆ.

ತಾಕತ್ತಿದ್ದರೆ ನಾಳೆ ಈದ್ ಮಿಲಾದ್ ಮೆರವಣಿಗೆ ತಡೆಯಿರಿ ಎಂದು ಶರಣ್ ಪಂಪ್​​ವೆಲ್​ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದರು. ನಾಗಮಂಗಲ ಗಲಾಟೆ ಹಿನ್ನೆಲೆ ಶರಣ್ ಪಂಪ್​​ವೆಲ್ ಈದ್ ಮೆರವಣಿಗೆ ತಡೆಯುವ ಎಚ್ಚರಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಮುಖಂಡರು ಸಾಮಾಜಿಕ ತಾಣಗಳಲ್ಲಿ ಅಡಿಯೋ ಹರಿಬಿಟ್ಟಿದ್ದರು.


Share It

You cannot copy content of this page