ಕಲಬುರಗಿ: ಇಂದು ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗಾಗು ಚರ್ಚೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು. ಇಲ್ಲಿನ ಅಭಿವೃದ್ಧಿಗೆ ಅಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ಅಂಶಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉದ್ಯೋಗಾವಕಾಶ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಬಡವರ ಪರವಾದ ಸರ್ಕಾರವಾದ್ದರಿಂದ ಈ ಭಾಗದ ಅಭಿವೃದ್ಧಿಗೆ 500ಕೋಟಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

