ಅಪರಾಧ ಸಿನಿಮಾ ಸುದ್ದಿ

ದರ್ಶನ್ ನ್ಯಾಯಾಂಗ ಬಂಧನದ ಅವಧಿ ಸೆ.30 ರವರೆಗೆ ವಿಸ್ತರಣೆ

Share It

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ‌ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 24ನೇ ಎಸಿಎಂಎಂ ಕೋರ್ಟ್ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

ಇಂದು ದರ್ಶನ್ ಹಾಗೂ ಸಹಚರರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ ದರ್ಶನ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿತು.

ವಿಚಾರಣೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ತಮ್ಮ ಸೆಲ್ ನಲ್ಲಿ ಕುರ್ಚಿ ಬೇಕೆಂದು ಮತ್ತೊಮ್ಮೆ ಜಡ್ಜ್​ ಎದುರು ದರ್ಶನ್ ಪರ ವಕೀಲರು ಮನವಿ ಮಾಡಿದರು. ‘ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ.

ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ. ಆದರೆ, ದರ್ಶನ್​ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದರು. ‘ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ.

ಈ ಜೈಲಿನ ನಿಯಮದ ಪ್ರಕಾರ ದರ್ಶನ್ ಗೂ ಕೇಳಿದ್ದನ್ನು ಕೊಡಬೇಕು ಎಂದು ಆದೇಶ ಮಾಡುತ್ತೇನೆ’ ಎಂದು ವಿಚಾರಣೆಯಲ್ಲಿ ಜಡ್ಜ್ ಹೇಳಿದರು.


Share It

You cannot copy content of this page