ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿಶೇಷಚೇತನ ಯುವಕನ ಮೇಲೆ ಬಿಎಂಟಿಸಿ ಬಸ್ ಹರಿದು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.
ಬಿಎಂಟಿಸಿ ಚಾಲಕ ಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತಿ ವೇಗವೇ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ. ರಾತ್ರಿ 12.15ರ ಸುಮಾರಿನಲ್ಲಿ ಘಟನೆ ನಡೆದಿದ್ದು, ಕೆಎ 57 ಎಫ್ 4330 ಸಂಖ್ಯೆಯ ಬಿಎಂಟಿಸಿ ಬಸ್ ಹರಿದು ಘಟನೆ ಸಂಭವಿಸಿದೆ.
ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

