ರಾಜಕೀಯ ಸುದ್ದಿ

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ

Share It

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ.

ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಇಂದಿನ ಮೊದಲನೇ ಹಂತದ ಮತದಾನದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಕಾಶ್ಮೀರದ 16 ಮತ್ತು ಜಮ್ಮುವಿನ 8 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 219 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯ ಲಿಂಗದ ವ್ಯಕ್ತಿಗಳು ಸೇರಿದಂತೆ ಒಟ್ಟು 23,27,580 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

18 ರಿಂದ 19 ವರ್ಷ ವಯಸ್ಸಿನ 1.23 ಲಕ್ಷ ಯುವಕರು, 28,309 ವಿಕಲಚೇತನರು ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 15,774 ವೃದ್ಧ ಮತದಾರರು ಈ ಹಂತದ ಅರ್ಹ ಮತದಾರರಲ್ಲಿ ಸೇರಿದ್ದಾರೆ ಎಂದು ಚುನಾವಣಾ ಆಯೋಗ ಅಧಿಕಾರಿ ತಿಳಿಸಿದ್ದಾರೆ.

ಸುಗಮವಾಗಿ ಮತದಾನ ಪ್ರಕ್ರಿಯೆ ಸಾಗಲು 302 ನಗರ ಮತ್ತು 2,974 ಗ್ರಾಮೀಣ ಕೇಂದ್ರಗಳು ಸೇರಿದಂತೆ 3,276 ಮತಗಟ್ಟೆಗಳಲ್ಲಿ 14,000 ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿ ಸೇರಿದಂತೆ ನಾಲ್ವರು ಚುನಾವಣಾಧಿಕಾರಿಗಳ ತಂಡ ಇರಲಿದೆ.


Share It

You cannot copy content of this page