ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
21 ವರ್ಷದ ಪೃಥ್ವಿ ಎಂಬ ವೈದ್ಯಕೀಯ ವಿದ್ಯಾರ್ಥಿ ಸಂಜೆ ಶಿವಮೊಗ್ಗದ ಉದ್ಯಾನದಲ್ಲಿ ವಾಕಿಂಗ್ ಮಾಡುತ್ತಿದ್ದ, ಇದ್ದಕ್ಕಿದ್ದಂತೆ ಸುಸ್ತುಗೊಂಡು ಸ್ಥಳದಲ್ಲಿಯೇ ಕುಸಿದುಬಿದ್ದಿದ್ದ ಎನ್ನಲಾಗಿದೆ.
ಜತೆಯಲ್ಲಿದ್ದ ಕೆಲವು ಸ್ನೇಹಿತರು ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.