ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು.
ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗಿದ್ದರು.
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು. ಇದೇ ವರ್ಷ ಫೆಬ್ರವರಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲೂ ಶೇ 40ರ ಕಮಿಷನ್ ನ ಆರೋಪ ಮಾಡಿದ್ದರು.

