ಬೆಂಗಳೂರು: ನಗರದ ಪ್ರತಿಷ್ಠಿತ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಕಾಣಿಸಿಕೊಂಡಿದ್ದು, ನರ್ಸ್ ಗಳ ಸಮಯ ಪ್ರಜ್ಞೆಯಿಂದ ಏಳು ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಮಯ್ಯ ಆಸ್ಪತ್ರೆಯ ಕಾರ್ಡಿಯಾಕ್ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದು ತಕ್ಷಣವೇ ರೋಗಿಗಳನ್ನು ರಕ್ಷಣೆ ಮಾಡಿದ್ದಾರೆ. ಏಳು ಜನ ಹೃದ್ರೋಗ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿಯಿಂದ ರೋಗಿಗಳನ್ನು ಕಾಪಾಡುವ ಸಂದರ್ಭದಲ್ಲಿ ನರ್ಸ್ ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಈವರೆಗೆ ತಿಳಿದುಬಂದಿಲ್ಲ.

